ಬಳ್ಳಾರಿ, 18 ಅಕ್ಟೋಬರ್ :
ಆ್ಯಂಕರ್ : ಕನ್ನಡ ಚಲನಚಿತ್ರದ ನಟ, ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಕನಕ ದುರ್ಗಮ್ಮ ದೇವಿಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಬೆಳಿಗ್ಗೆ ಸಮಯದಲ್ಲಿ ಜೈ ಹನುಮಾನ್ ಸರ್ಜಾ ಅಭಿಮಾನಿಗಳ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಎಂ.ಜಿ ಕನಕ ಅವರು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಅಭಿಮಾನಿಗಳ ದೇವಾಲಯಕ್ಕೆ ಭೇಟಿ ನೀಡಿದ ಚಿರಂಜೀವಿ ಸರ್ಜಾ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ಸಲ್ಲಿಸಿದರು.
ನಂತರ ದೇವಾಲಯದ ಹೊರ ಭಾಗದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬದ ಸಂಭ್ರಮ ಸಡಗರದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಧ್ರುವ ಸರ್ಜಾ ಅವರ ಅಭಿಮಾನಿ ಎಂ.ಜಿ ಕನಕ ಅವರು ಸರ್ಜಾ ಕುಟುಂಬಕ್ಕೆ ಶ್ರೀ ಕನಕ ದುರ್ಗಮ್ಮ ದೇವಿ ಸದಾ ಒಳ್ಳೆಯದು ಮಾಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ನಗರಾಧ್ಯಕ್ಷರಾದ ಉಮಾರ್ ಫಾರೂಕ್, ಎ.ಕೆ ಗಾದಿಲಿಂಗಪ್ಪ, ಜಾನಿ, ಜಗ್ಗ ನಾಯ್ಕ, ಮೊಹಮ್ಮದ್ ಸೇರಿದಂತೆ ಧ್ರುವ ಸರ್ಜಾ ಅವರು ಅಭಿಮಾನಿಗಳು ಉಪಸ್ಥಿತರಿದ್ದರು.
ನಗರಾಧ್ಯಕ್ಷರಾದ ಉಮಾರ್ ಫಾರೂಕ್ ಪದಾಧಿಕಾರಿಗಳಾದ ವೈ.ಅರುಣ್ ಕುಮಾರ್, ವಿ.ಎಚ್ ನಾಗರಾಜ್, ಸಿ. ತಿಪ್ಪೇರುದ್ರ, ಯೋಗೇಶ್ ಕುಮಾರ್, ಷಾಷಾ, ವಿನಯ್ ಕುಮಾರ್, ಡಿ.ಕೆ ಗಾದಿ ಸೇರಿದಂತೆ ಧ್ರುವ ಸರ್ಜಾ ಅವರ ಅಭಿಮಾನಿಗಳು ಭಾಗವಹಿಸಿದ್ದರು.
