ಬೆಂಗಳೂರು, 19ಅಕ್ಟೋಬರ್ :
ಆ್ಯಂಕರ್ :
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಿಬಿಐ ತನಿಖೆ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸಿಬಿಐ ತನಿಖೆ ಸಂಬಂಧ ಕರ್ನಾಟಕ ಹೈಕೋರ್ಟ್ ಇಂದು (ಅಕ್ಟೋಬರ್ 19) ಮಹತ್ವದ ತೀರ್ಪು ಪ್ರಕಟಿಸಲಿದೆ. ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ತೀರ್ಪು ನೀಡಲಿದೆ.
ಏನಿದು ಪ್ರಕರಣ?
ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು.
