ಪುಣೆ, 19ಅಕ್ಟೋಬರ್ :
ಆ್ಯಂಕರ್ :ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಹ್ಯಾಟ್ರಿಕ್ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಗೆಲುವಿನ ಓಟ ಮುಂದುವರೆಸುವ ತವಕದಲ್ಲಿದ್ದರೆ, ಇತ್ತ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮಾತ್ರ ಕಂಡಿರುವ ಬಾಂಗ್ಲಾಕ್ಕೆ ಈ ಮ್ಯಾಚ್ ಮಹತ್ವದ್ದಾಗಿದೆ.
ಭಾರತದಲ್ಲಿ ಬದಲಾವಣೆ?:
ಮೇಲ್ನೋಟಕ್ಕೆ ಬಾಂಗ್ಲಾದೇಶ ತಂಡ ಭಾರತಕ್ಕೆ ದೊಡ್ಡ ಸವಾಲು ಅಲ್ಲ. ಹೀಗಾಗಿ ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಲಾಗಿದೆ. ಕೆಲವು ಆಟಗಾರರಿಗೆ ವಿಶ್ರಾಂತಿ ನೀಡಬಹುದು. ಮುಖ್ಯವಾಗಿ ಈ ಬಾರಿಯ ವಿಶ್ವಕಪ್ನಲ್ಲಿ ಎದುರಾಳಿಗೆ ದೊಡ್ಡ ಸವಾಲು ನೀಡದ ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಶಮಿ ಕಣಕ್ಕಿಳಿಯುವ ಸಂಭವವಿದೆ. ಹಾಗೆಯೆ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಬಹುದು. ಇವರು ವಿರಾಟ್ ಕೊಹ್ಲಿ ಅಥವಾ ಶ್ರೇಯಸ್ ಅಯ್ಯರ್ ಜಾಗಕ್ಕೆ ಬರಬಹುದು. ಉಳಿದಂತೆ ಬದಲಾವಣೆ ಅನುಮಾನ.
