
ಬೆಂಗಳೂರು, 19ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಮಳೆ ಇಲ್ಲದೆ ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮತ್ತೊಂದೆಡೆ ನೀರಿನ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲೂ ಕುಸಿತ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಶುರುವಾಗಿದ್ದು, ಇದರಿಂದ ರೈತರು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇನ್ನು ಇಂದು (ಅಕ್ಟೋಬರ್ 19) ಬೆಂಗಳೂರಿನ ಕೆಲ ಪದೇಶದ ಜನರಿಗೂ ವಿದ್ಯುತ್ ಸಮಸ್ಯೆ ಎದುರಾಗಲಿದೆ. ಹೌದು.. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮತ್ತು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಇಂದು (ಗುರುವಾರ) ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಸಮಸ್ಯೆ ಎದುರಾಗಲಿದೆ.
ಹಿಂದೂಸ್ತಾನ್ ಸಮಾಚಾರ್
