ಬೆಂಗಳೂರು,20ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಪಂದ್ಯ ಮಧ್ಯಾಹ್ನ ೨ ಗಂಟೆಗೆ ನಡೆಯಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ವರ್ಲ್ಡ್ ಕಪ್ ಪಂದ್ಯ ಇಂದು ನಡೆಯಲಿದ್ದು, ಪಾಕಿಸ್ತಾನ ಹಾಗೂ ಅಸ್ಟ್ರೇಲಿಯಾ ಮಧ್ಯೆ ಹಣಾಹಣಿ ಏರ್ಪಟ್ಟಿದೆ. ಈ ಹಿನ್ನಲೆ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಹಾಗೂ ಕೇಂದ್ರ ವಿಭಾಗ ಡಿಸಿಪಿ ಟಿ.ಹೆಚ್ ಶೇಖರ್ ನೇತೃತ್ವದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭಧ್ರತೆ ಕೈಗೊಳ್ಳಲಾಗಿದೆ. ಹೌದು, ಶ್ವಾನದಳ ಮತ್ತು ಬಾಂಬ್ ಡಿಡೆಕ್ಟರ್ರಿಂದ ಭಧ್ರತಾ ಪರಿಶೀಲನೆ ನಡೆಸಲಾಗಿದೆ. ಕ್ರೀಡಾಂಗಣದಲ್ಲಿ ಒಟ್ಟು 623 ಜನ ಪೊಲೀಸರ ನಿಯೋಜನೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
