ನವದೆಹಲಿ, 12 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಏರಿಕೆಯಾಗಿದೆ.
24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,30,760 ರಿಂದ ₹1,30,910 ರಲ್ಲಿ ಮಾರಾಟಾವಾಗುತ್ತಿದ್ದು, 22 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,19,860–₹1,20,010 ರಂತೆ ಮಾರಾಟವಾಗುತ್ತಿದೆ.
ದೆಹಲಿಯಲ್ಲಿ ಬೆಳ್ಳಿ ಬೆಲೆ ಪ್ರತಿ ಕಿಲೋಗ್ರಾಂಗೆ ₹2,01,100 ತಲುಪಿದೆ.
ಮುಂಬೈ, ಅಹಮದಾಬಾದ್, ಚೆನ್ನೈ, ಕೋಲ್ಕತ್ತಾ ಮತ್ತು ಭೋಪಾಲ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಚಿನ್ನದ ದರಗಳಲ್ಲಿ ಸಮಾನ ಪ್ರಮಾಣದ ಏರಿಕೆ ಕಂಡು ಬಂದಿದೆ.
ಬೆಂಗಳೂರು, ಹೈದರಾಬಾದ್ ಮತ್ತು ಭುವನೇಶ್ವರದಲ್ಲೂ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1,30,760, 22 ಕ್ಯಾರೆಟ್ ಚಿನ್ನ ₹1,19,860 ರೂ.ನಲ್ಲಿ ಮಾರಾಟವಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
