ದೆಹಲಿ, 11 ಜನವರಿ(ಹಿ.ಸ):
ಆ್ಯಂಕರ್ :
ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ದೇಶಾದ್ಯಂತ ೩೨ ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾಣೆ ಮೂಲಕ ವಿದ್ಯಾರ್ಥಿ ವೇತನ ಮಂಜೂರು ಮಾಡಿದೆ.
ಸಚಿವಾಲಯ ೧ ಸಾವಿರದ ೬೯೨ ಕೋಟಿ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನವನ್ನು ವಿವಿಧ ವಿದ್ಯಾರ್ಥಿ ಯೋಜನೆಗಳಡಿ ನೀಡಲಾಗಿದೆ. ಅದರಲ್ಲಿ ಪರಿಶಿಷ್ಟ ಪಂಗಡದ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳು, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣಕ್ಕಾಗಿ ನೀಡುವ ರಾಷ್ಟ್ರೀಯ ಫೆಲೊಶಿಪ್ ಯೋಜನೆ ಸೇರಿದಂತೆ ವಿವಿಧ ವಿದ್ಯಾರ್ಥಿವೇತನ ನೀಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ.
ಹಿಂದೂಸ್ತಾನ್ ಸಮಾಚಾರ್
