ದೆಹಲಿ, 14 ಡಿಸೆಂಬರ್(ಹಿ.ಸ):
ಆ್ಯಂಕರ್ :
ಸರ್ಕಾರಿ ಉದ್ಯೋಗಿಗಳಿಗೆ ಹಿಂದೆ ಜಾರಿಯಲ್ಲಿದ್ದ ಪಿಂಚಣಿ ಯೋಜನೆಗೆ ಮರಳುವ ಯಾವ ಆಲೋಚನೆ ತನಗೆ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮೊನ್ನೆ ನೀಡಿದ ಲಿಖಿತ ಉತ್ತರದಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ‘2004ರ ಜನವರಿ 1ರಂದು ಮತ್ತು ಆ ಬಳಿಕ ನೇಮಕವಾದ ಕೇಂದ್ರ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ’ ಎಂದು ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
