ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಿಂದುಳಿದ ವರ್ಗಗಳಿಗೆ ಸಾಲ ಬೆಂಬಲಕ್ಕಾಗಿ ರಾಷ್ಟ್ರವ್ಯಾಪಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ, ಪ್ರಧಾನ ಮಂತ್ರಿ ಸಾಮಾಜಿಕ್ ಉತ್ಥಾನ್ ಎವಮ್ ರೋಜ್ಗಾರ್ ಅಧಾರಿತ್ ಜನಕಲ್ಯಾಣ್ – ಪಿಎಂ ಸೂರಜ್ ರಾಷ್ಟ್ರೀಯ ಪೋರ್ಟಲ್ಗೆ ಚಾಲನೆ ನೀಡಲಿದ್ದಾರೆ. ದೇಶದ ಹಿಂದುಳಿದ ವರ್ಗಗಳ ಒಂದು ಲಕ್ಷ ಉದ್ಯಮಿಗಳಿಗೆ ಸಾಲ ಬೆಂಬಲ ನೀಡುತ್ತದೆ. ಪರಿಶಿಷ್ಟ ಜಾತಿಗಳು, ಹಿಂದುಳಿದ ವರ್ಗಗಳು ಮತ್ತು ನೈರ್ಮಲ್ಯ ಕಾರ್ಯಕರ್ತರು ಸೇರಿದಂತೆ ಹಿಂದುಳಿದ ವರ್ಗಗಳ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿ ಸಂವಾದ ನಡೆಸಲಿದ್ದಾರೆ. ಹಿಂದುಳಿದ ವರ್ಗಗಳಿಗೆ ಸಾಲ ಬೆಂಬಲ ನೀಡುವ ಉದ್ದೇಶ ಹೊಂದಿರುವ ಪಿಎಂ ಸೂರಜ್ ರಾಷ್ಟ್ರೀಯ ಪೋರ್ಟಲ್ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡುವ ಪ್ರಧಾನ ಮಂತ್ರಿಯ ಬದ್ಧತೆಯನ್ನು ಸಾಕಾರಗೊಳಿಸುತ್ತದೆ. ಇದು ಪರಿವರ್ತಕ ಉಪಕ್ರಮವಾಗಿದ್ದು, ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸುವ ಗುರಿಯನ್ನು ಹೊಂದಿದೆ. ಇದರ ಮೂಲಕ ದೇಶದಾದ್ಯಂತ ಅರ್ಹ ವ್ಯಕ್ತಿಗಳಿಗೆ ಸಾಲ ಬೆಂಬಲ ಒದಗಿಸಲಾಗುತ್ತದೆ. ಬ್ಯಾಂಕ್ಗಳು, ಬ್ಯಾಂಕಿಂಗ್ಯೇತರ ಹಣಕಾಸು ಕಂಪನಿಗಳು ಮತ್ತು ಇತರ ಸಂಸ್ಥೆಗಳ ಮೂಲಕ ಸಾಲದ ಬೆಂಬಲ ಕಲ್ಪಿಸಲಾಗುತ್ತದೆ. ಕಾರ್ಯಕ್ರಮದಲ್ಲಿ, ಪ್ರಧಾನ ಮಂತ್ರಿ ಸಫಾಯಿ ಮಿತ್ರರಿಗೆ ಆಯುಷ್ಮಾನ್ ಹೆಲ್ತ್ ಕಾರ್ಡ್ಗಳು ಮತ್ತು ಪಿಪಿಇ ಕಿಟ್ಗಳನ್ನು ವಿತರಿಸಲಿದ್ದಾರೆ. ಈ ಉಪಕ್ರಮವು ಮುಂಚೂಣಿಯ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಪ್ರತಿನಿಧಿಸುತ್ತದೆ. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ವಿವಿಧ ಸರ್ಕಾರಿ ಯೋಜನೆಗಳ ಸುಮಾರು ಮೂರು ಲಕ್ಷ ಫಲಾನುಭವಿಗಳು ಭಾಗವಹಿಸಲಿದ್ದಾರೆ.
