ಬೆಂಗಳೂರು, :
ಆಸ್ತಿ ತೆರಿಗೆ ಯನ್ನು ಸಮಯಕ್ಕೆ ಸರಿಯಾಗಿ ಕಟ್ಟುವವರಿಗೆ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ. ಆ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬುಧವಾರ ಆಸ್ತಿ ತೆರಿಗೆ ಕಟ್ಟುವ ತೆರಿಗೆದಾರರಿಗೆ ಸಿಹಿಸುದ್ದಿ ನೀಡಿದೆ. ಅಷ್ಟೆ ಅಲ್ಲದೇ ಈ ಬಾರಿ ಅವಧಿಯನ್ನು ಮೇ 1ರಿಂದ ಜುಲೈ 31ರವರೆಗೆ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೊರಡಿಸಿದ ಸುತ್ತೋಲೆ ಪ್ರಕಾರ, ತೆರಿಗೆದಾರರು 2024-25ನೇ ಹಣಕಾಸು ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರೊಳಗೆ ಪಾವತಿಸಿದರೆ ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಜೊತೆಗೆ ವಿನಾಯಿತಿ ನೀಡುವ ಸೌಲಭ್ಯವನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದ
