ನವದೆಹಲಿ, 1 ಫೆಬ್ರವರಿ :
ಆ್ಯಂಕ್ಯರ್ :ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಗುರುವಾರ (ಫೆ. 1)ಸಂಸತ್ನಲ್ಲಿ ಮಧ್ಯಂತರ ಮುಂಗಡಪತ್ರ ಮಂಡನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಅವರ ಬಜೆಟ್ ಭಾಷಣ ಶುರುವಾಗಲಿದೆ. ಮಧ್ಯಾಹ್ನ 1ರಿಂದ 2 ಗಂಟೆಯವರೆಗೆ ಭಾಷಣ ಮುಂದುವರಿಯಬಹುದು. ಎನ್ಡಿಎ-2 ಸರ್ಕಾರದ ಕೊನೆಯ ಬಜೆಟ್ ಇದಾಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಇದು ಸತತ ಆರನೇ ಬಜೆಟ್ ಕೂಡ ಆಗಿದೆ. ಮೊದಲ ಮಧ್ಯಂತರ ಬಜೆಟ್ ಕೂಡ ಅವರದ್ದಾಗಿದೆ. ಚುನಾವಣೆಗೆ ಮುಂಚಿನ ಬಜೆಟ್ ಇದಾದ್ದರಿಂದ ಸಾಕಷ್ಟು ಕುತೂಹಲವೂ ಇದೆ. ಆದರೆ, ಚುನಾವಣೆ ಬಳಿಕ ಮತ್ತೆ ಪೂರ್ಣ ಬಜೆಟ್ ಮಂಡನೆ ಆಗುವುದರಿಂದ ಈ ಮಧ್ಯಂತರ ಬಜೆಟ್ಗೆ ಹೆಚ್ಚಿನ ಮಹತ್ವ ಇರುವುದಿಲ್ಲ. ಆದರೂ ಕೂಡ ಸರ್ಕಾರದ ಮುಂದಿನ ದಾರಿ ಬಗ್ಗೆ ಇರುವ ದೃಷ್ಟಿಕೋನ ಈ ಬಜೆಟ್ನಿಂದ ತಿಳಿಯಬಹುದು.
