ಬೆಂಗಳೂರು, 15 ಫೆಬ್ರವರಿ :
ಆ್ಯಂಕರ್:ಬಹುನಿರೀಕ್ಷಿತ 2024-25ನೇ ಸಾಲಿನ ರಾಜ್ಯ ಮುಂಗಡಪತ್ರ ಶುಕ್ರವಾರ ಮಂಡನೆಯಾಗಲಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ಬಾರಿಗೆ ಮುಂಗಡ ಪತ್ರ ಮಂಡಿಸಿದಂತಾಗಲಿದೆ. ಇತ್ತೀಚಿಗಷ್ಟೇ ಕೇಂದ್ರದ ಮುಂಗಡಪತ್ರ ಮಂಡನೆಯಾಗಿದ್ದು, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಬೆಂಕಿ ಉಗುಳುತ್ತಿದ್ದಾರೆ. ಉಭಯ ಪಕ್ಷಗಳ ನಾಯಕರ ನಡುವೆ ತರಿಗೆ ಯುದ್ಧ ನಡೆಯುತ್ತಿದೆ. ಇದರ ನಡುವೆ ರಾಜ್ಯಸರ್ಕಾರದ ಮುಂಗಡಪತ್ರ ಮಂಡನೆಯಾಗುತ್ತಿದೆ.
ಲೋಕಸಭೆ ಚುನಾವಣೆ ಮೇಲೆ ಗಮನ ಇಟ್ಟುಕೊಂಡು ಶುಕ್ರವಾರದ ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯೆತೆಯೂ ಇದೆ.ಮುಂಗಡಪತ್ರ ಮಂಡನಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ.
ಸಿದ್ದರಾಮಯ್ಯ 15ನೇ ಮುಂಗಡಪತ್ರ, ಕರ್ನಾಟಕದ ಪಾಲಿಗೆ ದಾಖಲೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ. ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ.
ಈವರೆಗೂ ರಾಜ್ಯದ ಮುಂಗಡಪತ್ರ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ, ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪಂಚ ಗ್ಯಾರಂಟಿ ಹೊರೆ ಹಾಗೂ ಬರದ ಬರೆ ಸರ್ಕಾರಕ್ಕೆ ಸವಾಲಾಗಿದೆ. ಪ್ರಸಕ್ತ ವರ್ಷದಲ್ಲಿ ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
