ಬೆಂಗಳೂರು, 6 ಫೆಬ್ರವರಿ :
ಆ್ಯಂಕರ್ :
ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ನಾನಾ ರೀತಿಯ ತಂತ್ರಗಳನ್ನು ರೂಪಿಸುತ್ತಿವೆ. ಸದ್ಯ ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ.
ಅಕ್ಕಿ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಘೋಷಿಸಿದೆ. ನಾಫೆಡ್-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್ನ 7 ಸಂಚಾರಿ ವಾಹನಗಳಲ್ಲಿ ಭಾರತ್ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿ 29 ರೂ.ಗೆ ಲಭ್ಯವಾಗಲಿದೆ. 5 ಕೆಜಿ, 10 ಕೆಜಿ ಬ್ಯಾಗ್ಗಳಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಲಭ್ಯವಾಗಲಿದೆ. ಸಂಜೆ 4 ಗಂಟೆಯಿಂದ ಬೆಂಗಳೂರಿನಲ್ಲಿ ಭಾರತ್ ಅಕ್ಕಿ ಮಾರಾಟ ಆರಂಭವಾಗುತ್ತೆ. ನಾಳೆ ಮಂಡ್ಯ, ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ.
