ದೆಹಲಿ, 2 ಜನವರಿ(ಹಿ.ಸ):
ಆ್ಯಂಕರ್ :
ಕಲ್ಲಿದ್ದಲು ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಿದೆ. ಕಳೆದ ತಿಂಗಳಲ್ಲಿ ಶೇಕಡ ೧೦.೯ರಷ್ಟು ಉತ್ಪಾದನೆ ಹೆಚ್ಚಳವಾಗಿತ್ತು ಎಂದು ಕಲ್ಲಿದ್ದಲು ಸಚಿವಾಲಯ ತಿಳಿಸಿದೆ.
ನವೆಂಬರ್ನಲ್ಲಿ ೭೬.೧೬ ಮಿಲಿಯನ್ ಟನ್ ಉತ್ಪಾದನೆಯಾಗಿದ್ದರೆ, ಡಿಸೆಂಬರ್ ತಿಂಗಳಲ್ಲಿ ೮೪.೫೨ ಮಿಲಿಯನ್ ಟನ್ ಉತ್ಪಾದನೆಯಾಗಿದೆ. ದೇಶದ ಆರ್ಥಿಕ ಬೆಳವಣಿಗೆ ಸುಸ್ಥಿರ ಅಭಿವೃದ್ಧಿಗೆ ಕಲ್ಲಿದ್ದಲು ಪ್ರಮುಖ ಅಂಶವಾಗಿದ್ದು, ಕೇಂದ್ರ ಸರ್ಕಾರ ದೇಶೀಯವಾಗಿ ಕಲ್ಲಿದ್ದಲು ಉತ್ಪಾದನೆ ಹಾಗೂ ವಾಣಿಜ್ಯ ಬಳಕೆಗೆ ಹರಾಜು ಮಾಡುವ ಕಲ್ಲಿದ್ದಲು ಹಂಚಿಕೆ ಕುರಿತಂತೆ ಸಚಿವಾಲಯ ಪುನಃ ಕಾರ್ಯಕ್ರಮವನ್ನು ರೂಪಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
