ಪಂಚಮಹಲ್, 15 ಜನವರಿ(ಹಿ.ಸ):
ಆ್ಯಂಕರ್ :
ಸಹಕಾರಿ ಸಂಸ್ಥೆಗಳಲ್ಲಿ ಪರಸ್ಪರ ಸಹಕಾರವನ್ನು ಬಲಪಡಿಸಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಪ್ರಾಯೋಗಿಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಯು ಸಹಕಾರಿ ಸಂಸ್ಥೆಗಳು ತಮ್ಮ ಬ್ಯಾಂಕ್ ಖಾತೆಯನ್ನು ಸಹಕಾರಿ ಬ್ಯಾಂಕ್ಗಳಲ್ಲಿ ಮಾತ್ರ ಹೊಂದಲು ಮನವೊಲಿಸುವ ಗುರಿಯನ್ನು ಹೊಂದಿದೆ. ಇದೇ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಚಿವರು ನೆರವೇರಿಸಲಿದ್ದಾರೆ. ಸಹಕಾರ ಸೇ ಸಮೃದ್ಧಿ ದೂರದೃಷ್ಟಿಯ ಗುರಿ ಸಾಧನೆಯ ನಿಟ್ಟಿನಲ್ಲಿ ಗುಜರಾತ್ ರಾಜ್ಯ ಸಹಕಾರಿ ಬ್ಯಾಂಕ್ ಬನಸ್ಕಾಂತ ಮತ್ತು ಪಂಚಮಹಲ್ ಜಿಲ್ಲೆಯಲ್ಲಿ ಪ್ರಾಯೋಗಿಕ ಯೋಜನೆಯನ್ನು ಮೊದಲು ಜಾರಿಗೆ ತಂದಿತು. ಎರಡು ಜಿಲ್ಲೆಗಳಲ್ಲಿ ಯೋಜನೆ ಯಶಸ್ವಿಯಾದ ನಂತರ ಇಂದು ದೇಶಾದ್ಯಂತ ಯೋಜನೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ಬನಾಸ್ ಡೈರಿಯ ಹಲವಾರು ಹೊಸ ಯೋಜನೆಗಳಿಗೆ ಕೇಂದ್ರ ಸಚಿವರ ಚಾಲನೆ ನೀಡುವರು. ಇವುಗಳಲ್ಲಿ ಬನಸ್ಕಾಂತದಲ್ಲಿರುವ ಬನಾಸ್ ಗೋವಿನ ಸಂತಾನೋತ್ಪತ್ತಿ ಮತ್ತು ಸಂಶೋಧನಾ ಕೇಂದ್ರ, ಅತ್ಯಾಧುನಿಕ ಅಟ್ಟಾ ಘಟಕ, ಬನಾಸ್ ಸಾವಯವ ಗೊಬ್ಬರ ಉತ್ಪನ್ನಗಳು, ಅಮುಲ್ ಸಾವಯವ ಮತ್ತು ಹಸುವಿನ ಸಗಣಿಯಿಂದ ಹೈಡ್ರೋಜನ್ ಉತ್ಪಾದನೆಯ ಪ್ರಯೋಗ ಸೇರಿವೆ. ಬನಾಸ್ ಡೈರಿಯು ಇಂದಿನಿಂದ ಕೇಂದ್ರ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಪಶುಪಾಲಕರಿಗೆ ಶೂನ್ಯ ಬಡ್ಡಿದರದ ಕ್ರೆಡಿಟ್ ಕಾರ್ಡ್ ಅನ್ನು ಒದಗಿಸಲಿದೆ ಎಂದು ನಮ್ಮ ಬಾತ್ಮಿದಾರರು ವರದಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
