ಮುಂಬೈ,22ನವೆಂಬರ್ (ಹಿ.ಸ):
ಆ್ಯಂಕರ್ :ಬರುವ ಡಿಸೆಂಬರ್ ೧೦ ರಂದು ಮುಂಬೈನಲ್ಲಿ ನಡೆಯಲಿರುವ ಸ್ಯಾರಿ ವಾಕಥಾನ್ಗೆ ಇ-ನೋಂದಣಿ ಮಾಡಿಕೊಳ್ಳುವ ಪೋರ್ಟಲ್ ಅನ್ನು ಜವಳಿ ಸಚಿವಾಲಯ ಬಿಡುಗಡೆ ಮಾಡಿದೆ.
ಕೇಂದ್ರ ಜವಳಿ ಖಾತೆ ರಾಜ್ಯ ಸಚಿವೆ ದರ್ಶನಾ ಜರ್ದೋಶ್ ಅವರು ಪೋರ್ಟಲ್ ಗೆ ಚಾಲನೆ ನೀಡಿ, ಭಾರತದಲ್ಲಿ ಸೀರೆ ಸಂಸ್ಕೃತಿಯನ್ನು ಜನಪ್ರಿಯಗೊಳಿಸುವುದು ಇದರ ಗುರಿಯಾಗಿದೆ ಎಂದರು.
ಈ ವಾಕಥಾನ್ನಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಸೀರೆಯುಟ್ಟ ಸುಮಾರು ೧೦ ಸಾವಿರಕ್ಕೂ ಅಧಿಕ ಮಹಿಳೆಯರು ಭಾಗವಹಿಸುವ ನಿರೀಕ್ಷೆ ಇದ್ದು, ಇದು ಸಾಂಸ್ಕೃತಿಕ ವೈವಿಧ್ಯತೆ ಮತ್ತು ಮಹಿಳಾ ಸಬಲೀಕರಣವನ್ನು ಪ್ರತಿನಿಧಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
