ಕಾನಹೊಸಹಳ್ಳಿ, 30 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಕಾನಹೊಸಹಳ್ಳಿ ಪಟ್ಟಣದಲ್ಲಿ ಸೋಮವಾರ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ರಾಣೆಬೆನ್ನೂರಿನ ಅರಣ್ಯ ವಲಯ ಅಧಿಕಾರಿ ಮಹಾಂತೇಶ್ ಅವರ ಹೆಂಡತಿಯ ಹೇಮಾವತಿ ಅವರ ಹೆಸರಿಗಿರುವ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ಬೆಳಗ್ಗೆ ಐದು ಗಂಟೆಯಿಂದ ಪರಿಶೀಲನೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು, ಹೇಮಾವತಿ ಅವರ ತಂದೆ ಮುದ್ದಪ್ಪರ ತಿಪ್ಪೇಸ್ವಾಮಿ ಅವರೊಂದಿಗೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ದಾವಣಗೆರೆ ಲೋಕಾಯುಕ್ತ ಇನ್ಸ್ಪೆಕ್ಟರ್ ಮಧಸೂಧನ್ ಸಿ ನೇತೃತ್ವದ ಎಂಟು ಜನರ ತಂಡ ದಾಳಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್
