• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Crime > ಗದಗ ಜಿಲ್ಲೆಯ ಭರ್ಜರಿ ಪೊಲೀಸ್ ಕಾರ್ಯಾಚರಣೆ
Crime

ಗದಗ ಜಿಲ್ಲೆಯ ಭರ್ಜರಿ ಪೊಲೀಸ್ ಕಾರ್ಯಾಚರಣೆ

CliQ INDIA
Last updated: August 23, 2025 9:50 pm
CliQ INDIA
Share
2 Min Read
SHARE
ಪೋಟೋ

ಗದಗ, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಪೊಲೀಸರು ಕಳೆದ ಒಂದು ವರ್ಷದ ಅವಧಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಹಲವು ಕಳ್ಳತನ, ವಂಚನೆ ಹಾಗೂ ಮೋಸ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆಗಸ್ಟ್ 1, 2024ರಿಂದ ಜುಲೈ 31, 2025ರವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣಗಳಲ್ಲಿ ಪತ್ತೆಯಾದ ಆಭರಣಗಳು, ನಗದು ಹಾಗೂ ವಸ್ತುಗಳನ್ನು ಮೂಲ ಮಾಲೀಕರಿಗೆ ಹಿಂತಿರುಗಿಸುವ ಕಾರ್ಯಕ್ರಮವು ಸಂಬಾಪುರ ರಸ್ತೆಯ ಪೊಲೀಸ್ ಭವನದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಅವರ ನೇತೃತ್ವದಲ್ಲಿ ಜರುಗಿತು.

ಕಳ್ಳತನ ಪ್ರಕರಣಗಳ ಪತ್ತೆ, ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 55 ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 27 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ 33 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ₹42 ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣಗಳು ಹಾಗೂ ₹5 ಲಕ್ಷ ಮೌಲ್ಯದ ಬೆಳ್ಳಿಯ ಆಭರಣಗಳು ವಶಪಡಿಸಿಕೊಳ್ಳಲಾಯಿತು. ಇದಲ್ಲದೆ ಕಳ್ಳತನ ಪ್ರಕರಣಗಳಲ್ಲಿ ₹2,74,900 ನಗದು ಮೊತ್ತ ಕೂಡ ವಾಪಸು ಪಡೆಯಲಾಗಿದೆ.

ಗದಗ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 49 ವಾಹನ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಪೊಲೀಸರು 25 ವಾಹನಗಳನ್ನು ಪತ್ತೆಹಚ್ಚಿ, 35 ಮಂದಿಯನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ವಾಹನಗಳನ್ನು ಮೂಲ ಮಾಲೀಕರಿಗೆ ಹಿಂತಿರುಗಿಸಲಾಯಿತು.

ಮೋಸ ಮತ್ತು ವಂಚನೆ ಪ್ರಕರಣಗಳು, ವಂಚನೆ ಹಾಗೂ ಮೋಸದ 21 ಪ್ರಕರಣಗಳು ದಾಖಲಾಗಿ, ಅದರಲ್ಲಿ 9 ಪ್ರಕರಣಗಳನ್ನು ಪತ್ತೆಹಚ್ಚಿ 27 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಒಟ್ಟು ₹13,90,345 ಮೊತ್ತವನ್ನು ವಶಪಡಿಸಿಕೊಳ್ಳಲಾಗಿದೆ.

ಮೊಬೈಲ್ ಕಳ್ಳತನ ಪ್ರಕರಣಗಳು, ಜಿಲ್ಲಾ ಮಟ್ಟದಲ್ಲಿ ಕಳೆದ ಒಂದು ವರ್ಷದಲ್ಲಿ 1,137 ಮೊಬೈಲ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ₹41,55,000 ಮೌಲ್ಯದ 277 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಅವರು ಮಾತನಾಡಿ,“ಕಳೆದ ಒಂದು ವರ್ಷದಲ್ಲಿ ಸ್ವತ್ತಿನ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಪೊಲೀಸರು ಹಗಲು-ರಾತ್ರಿ ಶ್ರಮಿಸಿದ್ದಾರೆ. ಪ್ರಕರಣ ಪತ್ತೆಯ ಪ್ರಮಾಣ ಶೇ.70ಕ್ಕೆ ತಲುಪಿದೆ. ಸುಲಿಗೆ ಪ್ರಕರಣಗಳಲ್ಲಿ ಶೇ.80ರಷ್ಟು ಪತ್ತೆ ಮಾಡಲಾಗಿದೆ. ಬಡವರು ಜೀವನ ಪೂರ್ತಿ ದುಡಿದು ಸಂಪಾದಿಸಿದ ಆಭರಣಗಳನ್ನು ಕಿಡಿಗೆಡಿಗಳು ಕದ್ದಿದ್ದರು. ಅವುಗಳನ್ನು ವಾಪಸು ನೀಡಲು ನಮ್ಮ ಪೊಲೀಸರು ಸಾಕಷ್ಟು ಶ್ರಮಿಸಿದ್ದಾರೆ. ಹೊರ ರಾಜ್ಯಗಳಿಗೂ ಹೋದಿದ್ದು, ಆರೋಪಿಗಳನ್ನು ಬಂಧಿಸಿ ಕರೆದೊಯ್ದಿದ್ದೇವೆ. ಜನರ ವಿಶ್ವಾಸ ಕಾಪಾಡಲು ಮುಂದೆಯೂ ಇದೇ ರೀತಿ ಭದ್ರತೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP

You Might Also Like

ಒಡಿಶಾದಲ್ಲಿ ಸರಣಿ ಅಪಘಾತ; ಮೂವರು ಸಾವು, 13 ಜನರಿಗೆ ಗಾಯ
ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ರೀ ಫಿಲ್ಲಿಂಗ್, ಓರ್ವ ಸೇರಿದಂತೆ ವಸ್ತುಗಳು ವಶಕ್ಕೆ
ಕೋಲಾರದಲ್ಲಿ ಯುವಕರಲ್ಲಿ ಹೆಚ್ಚುತ್ತಿರುವ ಅಪರಾಧ ಮನೋಭಾವ
ಕಾಮಸಮುದ್ರಂ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ
ಕಾರು ಪಲ್ಟಿ, ನಾಲ್ವರ ದುರ್ಮರಣ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಧರ್ಮಸ್ಥಳ ಪ್ರಕರಣ ತನಿಖೆ ಮುಂದುವರಿಕೆ : ಜಿ.ಪರಮೇಶ್ವರ
Next Article ಧರ್ಮಸ್ಥಳದಲ್ಲಿ ಶವ ಹೂತಿರುವ ಪ್ರಕರಣ : ಅನಾಮಿಕ ದೂರುದಾರನನ್ನು ಬಂಧಿಸಿದ ಎಸ್ಐಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?