ಗುಡೇಕೋಟೆ, 16 ಜನವರಿ(ಹಿ.ಸ):
ಆ್ಯಂಕರ್ : ತಂದೆಯ ಮಾನಸಿಕ ಅನಾರೋಗ್ಯದ ಕಾರಣ ತನ್ನ ವಿವಾಹಕ್ಕೆ ಸೂಕ್ತವಾದ ಹೆಣ್ಣು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕ ಬಿ. ಮಧುಸೂಧನ್. ಈತನ ತಂದೆಯು ಇತ್ತೀಚಿನ ದಿನಗಳಲ್ಲಿ ಮಾನಸಿಕ ಅಸ್ವಸ್ಥನಾಗಿದ್ದು, ಅನೇಕ ಯುವತಿಯರು ಮತ್ತು ಯುವತಿಯರ ಪೋಷಕರು ಇದೇ ಕಾರಣ ನೀಡಿ ವಿವಾಹಕ್ಕೆ ಒಪ್ಪುತ್ತಿರಲಿಲ್ಲ. ಕಾರಣ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಷ ಸೇವಿಸಿದ್ದ ಮಧುಸೂಧನನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆತನು ಮೃತಪಟ್ಟಿದ್ದಾನೆ. ಗುಡೇಕೋಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
