ಚಿತ್ರದುರ್ಗ, 31 ಡಿಸೆಂಬರ್(ಹಿ.ಸ):
ಆ್ಯಂಕರ್ : ಹೊಸ ವರ್ಷದ ಹೊಸ್ತಿಲಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತ್ಯೇಕ ಭೀಕರ ಅಪಘಾತದಲ್ಲಿ ಮೂವರು ಅಸುನಿಗಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ತಾಲೂಕಿನ ಹೊಸ ಕಲ್ಲಹಳ್ಳಿ ಬಳಿ ಆಟೋ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರ ಪ್ರಾಣ ಪಕ್ಷಿ ಸ್ಥಳದಲ್ಲೇ ಹಾರಿ ಹೋದ ಘಟನೆ ನಡೆದಿದೆ.
ಮೃತರನ್ನ ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪ( 30), ಆಟೋದಲ್ಲಿ ಪ್ರಯಾಣಿಸುತಿದ್ದ ಬರ್ಕತ್ ಆಲಿ( 35) ಸ್ಥಳದಲ್ಲೇ ಸಾವೀಗೀಡಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಆಟೋದಲ್ಲಿದ್ದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ಅತಿ ವೇಗ ಮತ್ತು ಅಜಾಗ್ರತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತೊಂದು ಅಪಘಾತ ಚಳ್ಳಕೆರೆ ತಾಲೂಕಿನ ತಳುಕು ಸಮೀಪದ ಗಿರಿಯಮ್ಮನಹಳ್ಳಿ ಬಳಿ ಟಿವಿಎಸ್ ಬೈಕ್ ಮತ್ತು ಬುಲೋರ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಳುಕು ಲಂಬಾಣಿಹಟ್ಟಿ ಗ್ರಾಮದ ರಾಜನಾಯ್ಕ (55) ವರ್ಷ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸಿಟ್ಟಿಗೆದ್ದ ಮೃತ ಸಂಬಂಧಿಕರು ಗಿರಿಯಮ್ನಳ್ಳಿ ಗ್ರಾಮಸ್ಥರು ಕೆಲಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್
