ಬಳ್ಳಾರಿ, 11 ನವೆಂಬರ್ (ಹಿ.ಸ):
ಆ್ಯಂಕರ್ : ನಗರದ 7ನೇ ವಾರ್ಡ್ ಸರ್ಕಾರಿ ಹೆರಿಗೆ ಅಸ್ಪತ್ರೆ ಹತ್ತಿರದ ಕುರಿ ಕಮೇಲಾದ ಲಕ್ಷ್ಮಿನಾರಾಯಣ(15) ನ.08 ರಂದು ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಕಾಣೆಯಾದ ಬಾಲಕನ ಚಹರೆ ಗುರುತು: ಎತ್ತರ 5.5 ಅಡಿ, ಬೆಳ್ಳನೆ ಮೈಬಣ್ಣ, ತೆಳುವಾದ ಮೈಕಟ್ಟು, ಕೋಲುಮುಖ, ತಲೆಯಲ್ಲಿ ಗುಂಗುರ ಕೂದಲು, ಚಿಗುರು ಗಡ್ಡ, ಚಿಗುರು ಮೀಸೆ ಇರುತ್ತವೆ. ಬಲಗೈ ಮೇಲೆ ಅಮ್ಮ ಅಂತ ಅಚ್ಚೆ ಗುರುತು ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಟಿ-ಶರ್ಟ್ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೆÇಲೀಸ್ ಠಾಣೆಯ ದೂ.08392-250033, ಮೊ.9480803096 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
