ಗುನಾ, 28 ಡಿಸೆಂಬರ್(ಹಿ.ಸ):
ಆ್ಯಂಕರ್ :
ಅಪಘಾತದ ಬಳಿಕ ಪ್ರಯಾಣಿಕರಿದ್ದ ಬಸ್ಸಿಗೆ ಬೆಂಕಿ ತಗುಲಿ 13 ಮಂದಿ ಜೀವಂತ ಸುಟ್ಟು ಭಸ್ಮವಾದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಿನ್ನೆ ರಾತ್ರಿ ನಡೆದಿದೆ.
ದುರ್ಘಟನೆಯಲ್ಲಿ 17 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುನಾ-ಅರೋನ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಬಸ್ ಮತ್ತೆ ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ನಂತರ ಬಸ್ಸಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ದೊಡ್ಡ ಅನಾಹುತ ನಡೆದಿದೆ.
ಗಾಯಗೊಂಡಿರುವ 17 ಮಂದಿಗೆ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಗುನಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿತ್ತು, ಅವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 13 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಬಸ್-ಲಾರಿಗೆ ಡಿಕ್ಕಿ ಹೊಡೆ ಪರಿಣಾಮ ದುರಂತ ಸಂಭವಿಸಿದೆ ಎಂದು ಗುನಾ ಡಿಸ್ಟ್ರಿಕ್ಟ್ ಕಲೆಕ್ಟರ್ ತರುಣ್ ರಾಟಿ ಮಾಹಿತಿ ನೀಡಿದ್ದಾರೆ.
ಮೃತದೇಹಗಳು ಸುಟ್ಟು ಕರಕಲಾಗಿರುವ ಹಿನ್ನೆಲೆಯಲ್ಲಿ ಮೃತಪಟ್ಟವರ ದೇಹದ ಗುರುತು ಸಿಕ್ಕಿಲ್ಲ. ಹೀಗಾಗಿ ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ. ಜೊತೆಗೆ ಪೊಲೀಸ್ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
