ಬಳ್ಳಾರಿ, 29 ನವೆಂಬರ್ (ಹಿ.ಸ):
ಆ್ಯಂಕರ್ : ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಗೆ ಬರುವ ಅಲ್ಲಿಪುರ ಗ್ರಾಮದ ಅಂಜಿನೇಯ ಗುಡಿಯ ಹತ್ತಿರ ನಿವಾಸಿ ಕೆ.ನಾಗರಾಜ್ (38) ನ.24ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೆÇಲೀಸ್ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 5.5 ಅಡಿ, ದೃಢವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಅಂಗಿ ಮತ್ತು ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ. 08392-276461, ಮೊ.9480803049 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೆÇಲೀಸ್ ಸಬ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
