
ದೆಹಲಿ, 15 ಡಿಸೆಂಬರ್(ಹಿ.ಸ):
ಆ್ಯಂಕರ್ :
ಸಂಸತ್ತಿನ ಭದ್ರತೆಯಲ್ಲಿ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ಮೈಂಡ್ ಲಲಿತ್ ಝಾ ರನ್ನು ಪೊಲೀಸರು ಬಂಧಿಸಿದ್ದಾರೆ.ಗುರುವಾರ ತಡರಾತ್ರಿ ಝಾ ಪೊಲೀಸರಿಗೆ ಶರಣಾಗಿದ್ದಾನೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದರು. ಬುಧವಾರ ಮಧ್ಯಾಹ್ನ ಲೋಕಸಭೆಯ ಶೂನ್ಯ ವೇಳೆಯಲ್ಲಿ ಇಬ್ಬರು ಯುವಕರು ಸದನದೊಳಗೆ ನುಗ್ಗಿ ಸ್ಮೋಕ್ ಬಾಂಬ್ ಎಸೆದಿದ್ದರು, ಇದರಿಂದ ಇಡೀ ಸದನವೇ ದಟ್ಟ ಹೊಗೆಯಿಂದ ಕೂಡಿತ್ತು. ಸಾಗರ್ ಹಾಗೂ ಮನೋರಂಜನ್ ಎಂಬುವವರನ್ನು ತಕ್ಷಣವೇ ಬಂಧಿಸಲಾಗಿತ್ತು.
ಹಾಗೂ ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ನೀಲಂ ಮತ್ತು ಅನ್ಮೋಲ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಲಲಿತ್ ಝಾ ತಲೆಮರೆಸಿಕೊಂಡಿದ್ದರು, ರಾಜಸ್ಥಾನದಲ್ಲಿ ಎಲ್ಲೋ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ ಗುರುವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದಾನೆ. ಆರೋಪಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಸಂಸತ್ ಭವನಕ್ಕೆ ಹೋಗಲು ಪಾಸ್ ವ್ಯವಸ್ಥೆ ಮಾಡಿದ್ದರು. ಈ ಎಲ್ಲಾ ಆರೋಪಿಗಳು ಸಾಮಾಜಿಕ ಮಾಧ್ಯಮ ಗುಂಪು ಭಗತ್ ಸಿಂಗ್ ಫ್ಯಾನ್ ಕ್ಲಬ್ನೊಂದಿಗೆ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
