ರಾಂಚಿ, 26 ಫೆಬ್ರವರಿ :
ಆ್ಯಂಕರ್:
ರಾಂಚಿಯ ಜೆಎಸ್ ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಮೂರನೇ ದಿನದಾಟದಲ್ಲಿ ಎಲ್ಲವೂ ಬದಲಾಗಿದ್ದು, ಆಂಗ್ಲರು ಕೇವಲ 145 ರನ್ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾಕ್ಕೆ ಗೆಲ್ಲಲು 192 ರನ್ಗಳ ಟಾರ್ಗೆಟ್ ನೀಡಿತು. ಗುರಿ ಬೆನ್ನಟ್ಟಲು ಶುರುಮಾಡಿದ ಭಾರತ ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ 24 ಹಾಗೂ ಯಶಸ್ವಿ ಜೈಸ್ವಾಲ್ 16 ರನ್ ಇಂದು ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಟೀಮ್ ಇಂಡಿಯಾ 3-1 ಅಂತರದಿಂದ ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಳ್ಳುವ ಹಾದಿಯಲ್ಲಿದೆ. ಆದರೆ, ರಾಂಚಿ ಟೆಸ್ಟ್ನ ನಾಲ್ಕನೇ ದಿನ ಮಳೆ ಬರುವ ಸಾಧ್ಯತೆ ಇದೆ. ಅಕ್ಯುವೆದರ್ ಮುನ್ಸೂಚನೆಗಳು ರಾಂಚಿಯ ದಿನ 4 (ಫೆಬ್ರವರಿ 26) ತಾಪಮಾನವು 16 ರಿಂದ 27 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ. 42 ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ತುಂತುರು ಮಳೆಯಾಗುವ ನಿರೀಕ್ಷೆಯಿದೆ.
