
ನವದೆಹಲಿ, 9 ಫೆಬ್ರವರಿ :
ಆ್ಯಂಕರ್ : ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ರಾಬ್ರಿ ದೇವಿ ಮತ್ತು ಇಬ್ಬರು ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್ ಗೆ ದೆಹಲಿ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕದವರೆಗೆ ಮಧ್ಯಂತರ ಜಾಮೀನು ನೀಡಿದೆ.
ಕಳೆದ ತಿಂಗಳು, ರೈಲ್ವೇ ಜಮೀನು-ಉದ್ಯೋಗಕ್ಕಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿತ್ತು. ನಂತರದಲ್ಲಿ ಮೂವರಿಗೂ ನ್ಯಾಯಾಲಯವು ಸಮನ್ಸ್ ನೀಡಿತ್ತು.
