ಬಲ್ಲಿಯಾ, 27 ಫೆಬ್ರವರಿ :
ಆ್ಯಂಕರ್:ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಪಿಕ್ ಅಪ್ ಟ್ರಕ್ ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಎಸ್ಪಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ತಲುಪಿದ್ದಾರೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕವಾಗಿರುವ ನಾಲ್ವರನ್ನು ವಾರಣಾಸಿಗೆ ರವಾನಿಸಲಾಗಿದೆ. ಜೀಪಿನಲ್ಲಿದ್ದವರು ಮಾಸುಂಪುರ್ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ದೋಕ್ತಿಗೆ ಹಿಂತಿರುಗುತ್ತಿದ್ದರು.
