ಶಿವಮೊಗ್ಗ, 18 ಫೆಬ್ರವರಿ :
ಆ್ಯಂಕರ್:ನಾನು ಲೋಕಸಭಾ ಚುನಾವಣೆ ಪ್ರಚಾರಕ್ಕೆ ಮತ್ತೆ ಬರುತ್ತೇನೆ. ಗ್ಯಾರಂಟಿ ಇಟ್ಟುಕೊಂಡು ಮತ ಕೇಳುತ್ತೆ. ಕಾಂಗ್ರೆಸ್ ಪಕ್ಷಕ್ಕಾಗಿ ಕತ್ತೆ ರೀತಿ ದುಡಿಯುತ್ತಿದ್ದೇನೆ ಎಂದು ಶಿಕ್ಷಣ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷ ಅವಕಾಶ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಈ ಬಗ್ಗೆ ಅಧಿಕೃತವಾಗಿ ನನಗೆ ಏನೂ ಹೇಳಿಲ್ಲ ಎಂದು ಹೇಳಿದ್ದಾರೆ. ವಿರೋಧ ಪಕ್ಷದವರಿಗೆ ಜನರು ಉತ್ತರ ಕೊಡುತ್ತಾರೆ. ಇವತ್ತು ಶಿಕಾರಿಪುರ ಸೇರಿ ರಾಜ್ಯದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಟೀಕಾ ಟಿಪ್ಪಣಿಗಳಿಗೆ ಈ ಸಮಾವೇಶ ಉತ್ತರ ಆಗುತ್ತೆ ಎಂದಿದ್ದಾರೆ.
