ಸಂಡೂರು, 31 ಜನವರಿ:
ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಬಿ.ರವಿ ಅವರ ಕಚೇರಿಯ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆದು, ವಿವಿಧ ದಾಖಲೆಗಳ ಪರಿಶೀಲನೆ ನಡೆಯಿತು.
ಲೋಕಾಯುಕ್ತ ಇನ್ಸ್ಪೆಕ್ಟರ್ ವಸಂತಕುಮಾರ್ ಹಾಗೂ ಮೂವರು ಕಚೇರಿ ಸಿಬ್ಬಂದಿಗಳು ಬುಧವಾರ ಬೆಳಿಗ್ಗೆ 8.30ರ ಸುಮಾರಿಗೆ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರ ಕಚೇರಿಗೆ ಆಗವಿಸಿ, ಅಲ್ಲಿದ್ದ ದಾಖಲೆಗಳ ಪರಿಶೀಲನೆಯನ್ನು ಪ್ರಾರಂಭಿಸಿದರು.
ನಿರ್ದೇಶಕರ ಬಳ್ಳಾರಿ ಹಾಗೂ ದಾವಣಗೆರೆ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿರುವುದಾಗಿ ತಿಳಿದುಬಂದಿದೆ.
