
ಇಟಾವಾ, 17 ಡಿಸೆಂಬರ್(ಹಿ.ಸ):
ಆ್ಯಂಕರ್ :
ಢಾಬಾಗೆ ಟ್ರಕ್ ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಮತ್ತು ಮೃತರ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಟಾವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವ್ನಿಶ್ ರೈ ಸುದ್ದಿಗಾರರಿಗೆ ತಿಳಿಸಿದರು.
ಮೃತಪಟ್ಟ ಮೂವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಮತ್ತು ಆತ ಮದ್ಯದ ಅಮಲಿನಲ್ಲಿದ್ದ ಎಂಬುದು ತಿಳಿದುಬಂದಿದೆ ಎಂದು ಇಟಾವಾ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಶವಗಳನ್ನು ಅವಶೇಷಗಳಡಿಯಿಂದ ಹೊರತೆಗೆಯಲು ಸುಮಾರು ಎರಡು ಗಂಟೆಗಳು ಬೇಕಾಯಿತು ಎಂದು ರೈ ಹೇಳಿದ್ದಾರೆ. ಬುಲ್ಡೋಜರ್ನಿಂದ ಢಾಬಾದ ಇಟ್ಟಿಗೆಗಳು ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
