ದೆಹಲಿ, 19 ಜನವರಿ(ಹಿ.ಸ):
ಆ್ಯಂಕರ್ :
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಐವರು ಸಜೀವ ದಹನವಾದ ಘಟನೆ ಪಿತಾಂಪುರಿಯಲ್ಲಿ ಮನೆಯೊಂದರಲ್ಲಿ ನಡೆದಿದೆ.
7 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರು. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಐದು ಜೀವಗಳ ಜೊತೆಗೆ ಕಟ್ಟಡದಲ್ಲಿದ್ದ ಲಕ್ಷಾಂತರ ಬೆಲೆ ಬಾಳುವ ವಸ್ತುಗಳು ಸಹ ಸುಟ್ಟು ಕರಕಲಾಗಿವೆ.
ಹಿಂದೂಸ್ತಾನ್ ಸಮಾಚಾರ್
