ಬೆಂಗಳೂರು, 13 ಜನವರಿ(ಹಿ.ಸ):
ಆ್ಯಂಕರ್ :
ಇಲ್ಲಿನ ರೇಸ್ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದ 3.47 ಕೋಟಿ ರೂ. ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರು ನಗರದಲ್ಲಿ ತಡರಾತ್ರಿ ನಡೆದಿದೆ.
ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್ಟಿ ಕಟ್ಟದೇ ವಂಚನೆ ಮಾಡಿದ ಆರೋಪಗಳ ಮೇಲೆ ರೇಸ್ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬುಕ್ಕಿಂಗ್ ಕೌಂಟರ್ಗಳನ್ನ ಲಾಕ್ ಮಾಡಿದ್ದಾರೆ. ಅಲ್ಲದೇ ಕೌಂಟರ್ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ತಡೆದು ಪರಿಶೀಲಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿಯನ್ನು ಅಂತ್ಯಗೊಳಿಸಿದ್ದಾರೆ.
ದಾಳಿ ವೇಳೆ ದಾಖಲೆಗಳಿಲ್ಲದ 3.47 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಈ ವೇಳೆ ಸಿಕ್ಕವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸುಮಾರು 60 ಜನರನ್ನ ವಶಕ್ಕೆ ಪಡೆದು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ನೋಟೀಸ್ ನೀಡಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
