
ಬಳ್ಳಾರಿ, 4 ಡಿಸೆಂಬರ್(ಹಿ.ಸ):
ಆ್ಯಂಕರ್ : ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಕೋಪಗೊಂಡ ಪತಿರಾಯನೊಬ್ಬ ಹೆಂಡತಿಯನ್ನು ಕೊಚ್ಚಿ ಕೊಂದಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ನಡೆದಿದೆ. ಮೈಬುನಾ ಬಿ. (35) ಕೊಲೆಯಾದ ಮಹಿಳೆ. ಡಯಾಲಿಸಿಸ್ ರೋಗಿಯಾಗಿರುವ ರಸೂಲ್ ಸಾಬ್, ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಮಲಗಿದ್ದ ಮೈಬುನಾಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ರಸೂಲ್ ಸಾಬ್ ತಾನೇ ಪೊಲೀಸರ ಮುಂದೆ ಶರಣಾಗಿದ್ದಾನೆ.
ನನಗೆ ಡಯಾಲಿಸಿಸ್ ಕಾಯಲೆ ಇದೆ. ಆದ್ರೆ, ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ. ಹಿಗಾಗಿ ನಾನು ಬೇಗ ಸಾಯುತ್ತೇನೆ. ನನಗಿಂತ ಮೊದಲು ಪತ್ನಿ ಸಾಯಬೇಕು ಎಂದು ಕೊಲೆ ಮಾಡಿರುವುದಾಗಿ ಆರೋಪಿ ರಸೂಲ್ ಸಾಬ್ ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
