
ನವದೆಹಲಿ,9 ನವೆಂಬರ್ (ಹಿ.ಸ):
ಆ್ಯಂಕರ್ :ನಕಲಿ ಮದ್ಯ ಸೇವಿಸಿ 6 ಮಂದಿ ಮೃತಪಟ್ಟಿರುವ ಘಟನೆ ಹರ್ಯಾಣದ ಯಮುನಾ ನಗರದಲ್ಲಿ ನಡೆದಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯ ಸೇವಿಸಿದ ಬಳಿಕ ವಾಂತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಲ್ಲಿ ಐವರು ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದರು. ಇನ್ನು ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೃತ ಸುರೇಶ್ ಕುಮಾರ್, ಸೋನು, ಸುರೀಂದರ್ ಪಾಲ್, ಸ್ವರಣ್ ಸಿಂಗ್ ಮತ್ತು ಮೆಹರ್ ಚಂದ್ ಅವರ ಕುಟುಂಬ ಸದಸ್ಯರು ಮರಣೋತ್ತರ ಪರೀಕ್ಷೆಯನ್ನು ಮಾಡದೆ ಅವರ ದೇಹವನ್ನು ಸುಟ್ಟುಹಾಕಲಾಗಿದೆ ಎಂದು ವರದಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್
