ಪಣಜಿ,10ನವೆಂಬರ್ (ಹಿ.ಸ):
ಆ್ಯಂಕರ್ :
ಗೋವಾದಲ್ಲಿ ಈ ತಿಂಗಳ ೨೦ರಿಂದ ೨೮ನೇ ತಾರೀಖಿನವರೆಗೆ ನಡೆಯಲಿರುವ ೫೪ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆ ಬಗ್ಗೆ ಕೇಂದ್ರ ಸಮಾಚಾರ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಪರಿಶೀಲನೆ ನಡೆಸಿದರು.
ಪಣಜಿಯಲ್ಲಿ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರ ಜತೆ ಕೇಂದ್ರ ಸಚಿವರು ಸಭೆ ನಡೆಸಿದರು. ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುರುಗನ್, ಚಲನಚಿತ್ರೋತ್ಸವಕ್ಕೆ ಗೋವಾ ಖಾಯಂ ತಾಣ ಎಂದು ಘೋಷಿಸಿದ ಬಳಿಕ ವರ್ಷದಿಂದ ವರ್ಷಕ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಹೆಚ್ಚು ಜನಪ್ರಿಯಗೊಳ್ಳುತ್ತಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಚಲನಚಿತ್ರೋತ್ಸವದ ಯಶಸ್ಸಿಗೆ ಚಿತ್ರೋದ್ಯಮದವರು ಸಹ ಮುಂದೆ ಬರುತ್ತಿದ್ದಾರೆ. ಈ ವರ್ಷ ಚಿತ್ರೋದ್ಯಮದಲ್ಲಿ ಭಾಗವಹಿಸಲು ನೋಂದಾಯಿಸಿಕೊಂಡವರ ಸಂಖ್ಯೆ ೨೫ ಸಾವಿರಕ್ಕೂ ಹೆಚ್ಚಾಗಿದೆ ಎಂದು ಮುರುಗನ್ ತಿಳಿಸಿದರು.
ಗೋವಾ ಮುಖ್ಯಮಂತ್ರಿ ಡಾ. ಸಾವಂತ್ ಮಾತನಾಡಿ, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗೋವಾ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
