ಬೆಂಗಳೂರು, 25ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಬೆಂಗಳೂರು ಅ.25: ಕಳೆದ ಒಂದು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ ಅವರು ಹುಲಿ ಉಗುರು ಲಾಕೆಟ್ ಧರಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್ ವಿರುದ್ಧ ಕಾಂಗ್ರೆಸ್ನ ಮಾಜಿ ಎಂಎಲ್ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ. ನಟ ಜಗ್ಗೇಶ್ ಹುಲಿ ಉಗುರು ಧರಿಸಿರುವ ಮತ್ತು ಇದು ಒರಿಜಿನಲ್ ಅಂತ ಅವರೇ ಹೇಳಿಕೊಂಡಿರುವ ವೀಡಿಯೋವನ್ನು ಹಲವಾರು ಜನ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಕಳುಹಿಸಿದ್ದಾರೆ. ಈ ವಿಡಿಯೋವನ್ನು ನೋಡಿದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದಿದ್ದಾರೆ. ಇದರಿಂದ ಸಂಸದ ಜಗ್ಗೇಶ್ ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್
