ಬೆಂಗಳೂರು, 29 ಡಿಸೆಂಬರ್(ಹಿ.ಸ):
ಆ್ಯಂಕರ್ :
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಕಾಟೇರ ಅಬ್ಬರ ಶುರುವಾಗಿದೆ.
ಸಿನಿಮಾ ಥಿಯೇಟರ್, ಮಾಲ್ಗಳ ಮುಂದೆ ಕಿಕ್ಕಿರಿದು ನಿಂತಿರುವ ಅಭಿಮಾನಿಗಳು ದರ್ಶನ್ ಕಟೌಟ್ಗೆ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಡಿಬಾಸ್ ಡಿಬಾಸ್ ಎಂದು ಜಯಘೋಷ ಹಾಕುತ್ತಾ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ಫ್ಯಾನ್ಸ್ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ನೋಡಿ ಹೊರ ಬಂದ ಅಭಿಮಾನಿಗಳು ಸಾರಥಿಗೆ ಜೈಕಾರ ಕೂಗತೊಡಗಿದ್ದಾರೆ. ಈ ನಡುವೆ ಕಾಟೇರಮ್ಮನ ಗುಡಿ ಮಾಡಿ ದೇವಿ ಪ್ರತಿಮೆ ಸ್ಥಾಪಿಸಿರುವ ದೃಶ್ಯಗಳು ಕಂಡುಬಂದಿವೆ.
ಹಿಂದೂಸ್ತಾನ್ ಸಮಾಚಾರ್
