ಹೈದರಾಬಾದ್, 26 ಡಿಸೆಂಬರ್(ಹಿ.ಸ):
ಆ್ಯಂಕರ್ :
ಖ್ಯಾತ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ನಿರ್ದೇಶಿಸಿರುವ ‘ವ್ಯೂಹಂ’ ಚಿತ್ರಕ್ಕೆ ಆಂಧ್ರಪ್ರದೇಶದಲ್ಲಿ ಬಾರಿ ಖಂಡನೆ ವ್ಯಕ್ತವಾಗುತ್ತಿದ್ದು ಹೈದರಾಬಾದ್ನ ರಾಮ್ ಗೋಪಾಲ್ ವರ್ಮಾ ಕಚೇರಿ ಎದುರು ತೆಲುಗು ದೇಶಂ ಪಾರ್ಟಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಚಿತ್ರ ಸೆಟ್ಟೇರಿದ ದಿನದಿಂದಲೇ ಹಲವು ತೊಡಕುಗಳನ್ನು ಎದುರಿಸುತ್ತಿದ್ದು ಡಿಸೆಂಬರ್ 29ಕ್ಕೆ ಚಿತ್ರ ಮಂದಿರಗಳಲ್ಲಿ ತೆರೆಕಾಣಲು ಸಿದ್ಧವಾಗಿದೆ. ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ಅವರ ಸಾವಿನ ಸುತ್ತಲಿನ ಸನ್ನಿವೇಶಗಳ ಕುರಿತಾಗಿ ಚಿತ್ರ ನಿರ್ಮಿಸಿದ್ದು ಟ್ರೈಲರ್ನಲ್ಲಿ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡುರವರನ್ನು ಖಳನಾಯಕನಂತೆ ಬಿಂಬಿಸಿದ್ದನ್ನು ಖಂಡಿಸಿ ಟಿಡಿಪಿ ಬೆಂಬಲಿಗರು ರಾಮ್ ಗೋಪಾಲ್ ವರ್ಮಾ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ವರ್ಮಾ ಭಾವಚಿತ್ರ ಹಾಗೂ ಪ್ರತಿಕೃತಿಗಳನ್ನು ಸುಟ್ಟು ಹಾಕಲಾಗಿದ್ದು ಸಿನಿಮಾ ಬಿಡುಗಡೆ ಮಾಡದಂತೆ ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
