ಬೆಂಗಳೂರು, 9 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು ಅವರ ನೆಚ್ಚಿನ ತೋಟದಲ್ಲಿ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ.
ಈಗಾಗಲೇ ಜೆಸಿಬಿ ಮೂಲಕ ಫಾರ್ಮ್ಹೌಸ್ನಲ್ಲಿ ಸಮಾಧಿ ತೆಗೆಯುವ ಕಾರ್ಯ ಆರಂಭಗೊಂಡಿದ್ದು, ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆಗೆ ತರಯಾರಿ ಶುರುವಾಗಿದೆ. ಮತ್ತೊಂದೆಡೆ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿಗಳು ಬರುವ ಗಣ್ಯರಿಗೆ ಅಂತಿಮ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸುತ್ತಿದ್ದಾರೆ.ಬೆಳಗ್ಗೆ 9:30ರ ವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೈದಾನ ಸುತ್ತ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರು ದರ್ಶನ ಪಡೆಯುತ್ತಿದ್ದು, ಎಲ್ಲರೂ ಲೀಲಾವತಿ ಅವರ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲಿದ್ದಾರೆ. ಇತರ ಗಣ್ಯರೂ ಅಂತಿಮ ದರ್ಶನ ಪಡೆದ ಬಳಿಕ ಅಂತ್ಯಕ್ರಿಯೆ ಕಾರ್ಯ ನೆರವೇರಲಿದೆ.
ಹಿಂದೂಸ್ತಾನ್ ಸಮಾಚಾರ್
