ಮುಂಬೈ, 7 ಡಿಸೆಂಬರ್(ಹಿ.ಸ):
ಆ್ಯಂಕರ್ :
ಬಾಲಿವುಡ್ ಬಾಕ್ಸ್ ಆಫೀಸ್ಗೆ 2023ರ ವರ್ಷ ಆಶಾದಾಯಕವಾಗಿದೆ. ಹಲವು ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಭಾರತದ ಮಾರುಕಟ್ಟೆಯಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ‘ಜವಾನ್’, ‘ಪಠಾಣ್’, ‘ಗದರ್ 2’ ಸಿನಿಮಾಗಳ ಬಳಿಕ ಈಗ ‘ಅನಿಮಲ್’ ಚಿತ್ರ ಕೂಡ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾಗೆ ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ಕಲೆಕ್ಷನ್ ಬಗ್ಗೆ ನಿರ್ಮಾಣ ಸಂಸ್ಥೆಯಾದ ಟಿ-ಸೀರಿಸ್ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.
‘ಅನಿಮಲ್’ ಸಿನಿಮಾ ತೆರೆಕಂಡು 5 ದಿನ ಕಳೆದಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್ನಲ್ಲಿ ಐದು ದಿನಕ್ಕೆ 481 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ನಿರ್ಮಾಪಕರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಂದರೆ, 500 ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನು 19 ಕೋಟಿ ರೂಪಾಯಿ ಮಾತ್ರ ಬಾಕಿ. 6ನೇ ದಿನ ಕೂಡ ಬಹುತೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ಹಾಗಾಗಿ ಅನಾಯಾಸವಾಗಿ ಈ ಸಿನಿಮಾಗೆ 500 ಕೋಟಿ ರೂಪಾಯಿ ಹರಿದುಬಂದಿದ್ದು, ಶೀಘ್ರದಲ್ಲೇ ಅಪ್ಡೇಟ್ ಸಿಗಲಿದೆ.
ಹಿಂದೂಸ್ತಾನ್ ಸಮಾಚಾರ್
