ನಟ ರಕ್ಷಿತ್ ಶೆಟ್ಟಿ ಅವರು ಕಾಪಿರೈಟ್ ಉಲ್ಲಂಘನೆ ಆರೋಪದಡಿ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಂಆರ್‍ಟಿ ಮ್ಯೂಸಿಕ್‌ನ ಪಾಲುದಾರ ನವೀನ್ ಕುಮಾರ್ ಅವರು ಈ ದೂರು ದಾಖಲಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿ ಇಲ್ಲದೆ ಎರಡು ಹಾಡುಗಳನ್ನು ಬಳಸಲಾಗಿದೆ ಎಂಬ ಆರೋಪವಿದೆ.
BulletsIn
- ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.
- ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
- ಎಂಆರ್‍ಟಿ ಮ್ಯೂಸಿಕ್‌ನ ಪಾಲುದಾರ ನವೀನ್ ಕುಮಾರ್ ಅವರು ದೂರು ನೀಡಿದ್ದಾರೆ.
- ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಸಿದ್ದಾರೆ ಎಂಬ ಆರೋಪವಿದೆ.
- 2024ರ ಜನವರಿಯಲ್ಲಿ ಹಾಡು ಬಳಕೆ ಬಗ್ಗೆ ಮಾತುಕತೆ ನಡೆದಿತ್ತಾದರೂ, ಮಾತುಕತೆ ಸರಿ ಹೊಂದಿರಲಿಲ್ಲ.
- 2024ರ ಮಾರ್ಚ್‍ನಲ್ಲಿ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿತ್ತು.
- ಸಿನಿಮಾದಲ್ಲಿ 2 ಚಿತ್ರಗಳ ಹಾಡು ಬಳಕೆ ಮಾಡಲಾಗಿದೆ.
