ಚೆನ್ನೈ, 22 ಫೆಬ್ರವರಿ :
ಆ್ಯಂಕರ್ : ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಎಐಎಡಿಎಂಕೆ ಪಕ್ಷದ ಮಾಜಿ ನಾಯಕ ಎ.ವಿ ರಾಜು ವಿರುದ್ಧ ನಟಿ ತ್ರಿಶಾ ಕೃಷ್ಣನ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಗುರುವಾರ ನಟಿ ತ್ರಿಶಾ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿ ತಮ್ಮ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಇತ್ತೀಚೆಗೆ, ಗಮನ ಸೆಳೆಯೋ ನಿಟ್ಟಿನಲ್ಲಿ ಇತಿ-ಮಿತಿ ಮೀರಿ ಮಾತನಾಡುವ ವ್ಯಕ್ತಿಗಳ ಬಗ್ಗೆ ನಟಿ ತ್ರಿಶಾ ತಮ್ಮ ಅಸಮಾಧಾನ ಹೊರಹಾಕಿದ್ದರು. ಜೊತೆಗೆ ತಮ್ಮ ಕಾನೂನು ತಂಡ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದರು.
