ಹೈದರಾಬಾದ್, 18 ಫೆಬ್ರವರಿ :
ಆ್ಯಂಕರ್:ನಟಿ ರಶ್ಮಿಕಾ ಮಂದಣ್ಣ ಹಾಗೂ ನಟಿ ಶ್ರದ್ಧಾ ದಾಸ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಷ ಮಾಡಲಾಗಿದೆ. ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದುದಾಗಿ ಹೇಳಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಶ್ರದ್ಧಾದಾಸ್ ಅವರುಗಳು ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.
ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಹೈದರಾಬಾದ್ ವಿಮಾನ ನಿಲ್ದಾಣದಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದರು. ಇಬ್ಬರೂ ಒಟ್ಟಿಗೆ ಪ್ರಯಾಣ ಮಾಡುತ್ತಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ತಮ್ಮ ಹಾಗೂ ಶ್ರದ್ಧಾದಾಸ್ ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದು, ‘ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ. ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
