ಹೈದರಾಬಾದ್, 8 ಮೇ : ಆ್ಯಂಕರ್:ಇಂಡಿಯನ್ ಪ್ರೀಮಿಯರ್ ಲೀಗ್ನ ೨೦೨೪ರ ೫೬ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ ೨೦ ಕ್ರಿಕೆಟ್ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ೨೦ ರನ್ಗಳಿಂದ ಪರಾಭವಗೊಳಿಸಿದೆ. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ ೨೦ ಓವರ್ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ ೨೨೧ ರನ್ ಗಳಿಸಿತು. ೨೨೨ ರನ್ ಗೆಲುವಿನ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್, ನಿಗದಿತ ೨೦ ಓವರ್ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ ೨೦೧ ರನ್ಗಳಿಸಿತು. ಅಭಿಷೇಕ್ ಪೋರೆಲ್ ೩೬ ಎಸೆತಗಳಲ್ಲಿ ೬೫ ರನ್ ಗಳಿಸಿ ಡೆಲ್ಲಿ ತಂಡದ ಗೆಲುವಿಗೆ ಕಾರಣರಾದರು. ಜೇಕ್ ಫ್ರೇಸರ್ ಮ್ಯಾಕ್ ಗುರ್ಕ್ ಕೇವಲ ೨೦ ಎಸೆತಗಳಲ್ಲಿ ೫೦ ರನ್ ಗಳಿಸಿದರು. ಡೆಲ್ಲಿ ತಂಡದ ಕುಲದೀಪ್ ಯಾದವ್, ಮುಖೇಶ್ ಕುಮಾರ್ ಹಾಗೂ ಖಲೀಲ್ ಅಹಮದ್ ತಲಾ ಎರಡು ವಿಕೆಟ್ ಪಡೆದರು. ರಾಜಸ್ಥಾನ್ ತಂಡದಲ್ಲಿ ಆರ್ ಅಶ್ವಿನ್ ಮೂರು ವಿಕೆಟ್ ಗಳಿಸಿದರು. ಕುಲದೀಪ್ ಯಾದವ್ ಅವರನ್ನು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಈ ಗೆಲುವಿನೊಂದಿಗೆ ದೆಹಲಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಸಾಗಿದ್ದು, ರಾಜಸ್ತಾನ್ ಎರಡನೇ ಸ್ಥಾನದಲ್ಲಿದೆ. ಇಂದು ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿವೆ.
