ಬೆಂಗಳೂರು,
ಆ್ಯಂಕರ್ :ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಿರ್ದೇಶಕ ತರುಣ್ ಸುಧೀರ್ ಮತ್ತು ತಂಡ ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಈ ಸಂಭ್ರಮದಲ್ಲಿ ದರ್ಶನ್ ಕಾಣಿಸಿದೇ ಇದ್ದರೂ, ನೂರು ದಿನ ಖುಷಿಯನ್ನು ಅಭಿಮಾನಿಗಳಿಗಾಗಿ ಚಿತ್ರತಂಡ ಹಂಚಿಕೊಂಡಿದೆ. ನೂರು ದಿನಗಳನ್ನು ಪೂರೈಸಿದ ಬೆನ್ನಲ್ಲೇ ಕಾಟೇರ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಂಡಿದೆ. ಯುಗಾದಿಗೂ ಎರಡು ದಿನ ಮುನ್ನ ಏಪ್ರಿಲ್ 7ಕ್ಕೆ ಸಂಜೆ 7ಕ್ಕೆ ಚಿತ್ರ ಪ್ರಸಾರವಾಗಿದೆ.
ಕಾಟೇರ ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದರೂ, ಒಟಿಟಿಯಲ್ಲೂ ಸ್ಟ್ರೀಮಿಂಗ್ ಆಗುತ್ತಿತ್ತು. ಒಟಿಟಿಯಲ್ಲಿ ಕಾಟೇರ ಪ್ರದರ್ಶನ ಕಾಣುತ್ತಿರುವುದಕ್ಕೆ ಹುಬ್ಬಳ್ಳಿಯ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಬರಮಾಡಿಕೊಂಡಿದ್ದರು. ಆಳೆತ್ತರದ ಕಟೌಟ್ ಹಾಕಿ ಕಾಟೇರನನ್ನು ಸ್ವಾಗತಿಸಿದ್ದರು.
ದರ್ಶನ್ ಸಿನಿಕರಿಯರ್ ನಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕಾಟೇರ ಬಾಕ್ಸಾಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ರಾಕ್ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾವನ್ನು ಒಟಿಟಿಗೆ ವಹಿವಾಟು ಮುಗಿಸಿತ್ತು.
