ಕೋಲ್ಕತ್ತಾ, 12 ಫೆಬ್ರವರಿ :
ಖ್ಯಾತ ನಟ ಹಾಗೂ ರಾಜಕಾರಣಿ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಅವರ ಆರೋಗ್ಯ ಸುಧಾರಣೆ ಕಾಣುತ್ತಿದೆ. ಅವರಿಗೆ ಮಿದುಳಿನ ಸ್ಟ್ರೋಕ್ ಆಗಿತ್ತು ಎಂದು ತಿಳಿದು ಬಂದಿದೆ. ಈ ವರದಿಯಿಂದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಆದರೆ, ಈ ರೀತಿ ಚಿಂತೆಗೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಶೀಘ್ರವೇ ಮಿಥುನ್ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಮಿಥುನ್ ಚಕ್ರವರ್ತಿಗೆ ಈಗ 73 ವರ್ಷ ವಯಸ್ಸು. ಅವರಿಗೆ ಶನಿವಾರ (ಫೆಬ್ರವರಿ 10) ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡಿತು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅವರು ಚೇತರಿಕೆ ಕಾಣುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೈದ್ಯರು ಕೂಡ ಅವರ ಆರೋಗ್ಯದ ಬಗ್ಗೆ ಒಳ್ಳೆಯ ಸುದ್ದಿಯನ್ನೇ ನೀಡಿದ್ದಾರೆ.
‘ಮಿಥುನ್ ಚಕ್ರವರ್ತಿ ಅವರು ಚೇತರಿಕೆ ಕಾಣುತ್ತಿದ್ದಾರೆ. ಡಿಸ್ಚಾರ್ಜ್ ಮಾಡುವುದಕ್ಕೂ ಮೊದಲು ಕೆಲವು ಪರೀಕ್ಷೆಗಳನ್ನು ಮಾಡಬೇಕಿದೆ’ ಎಂದಿದ್ದಾರೆ ವೈದ್ಯರು. ಈ ಮಾತನ್ನು ಕೇಳಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಅವರು ಬೇಗ ಮನೆಗೆ ಬರುವಂತಾಗಲಿ ಎಂದು ಅಭಿಮಾನಿಗಳು(ಫ್ಯಾನ್ಸ್) ಹಾರೈಸುತ್ತಿದ್ದಾರೆ.
