ಬೆಂಗಳೂರು, 26 ಫೆಬ್ರವರಿ :
ಆ್ಯಂಕರ್ : ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮಾರ್ಚ್ 17ಕ್ಕೆ ಅಪ್ಪು ಹುಟ್ಟು ಹಬ್ಬ. ಅಂದು ಅವರ ನಟನೆಯ ಜಾಕಿ ಚಲನಚಿತ್ರವನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದುನಿಯಾ ಸೂರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಚಿತ್ರ ಎಂದು ದಾಖಲಾಗಿದೆ.
ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ವಿಚಿತ್ರ ವೇಷಗಳನ್ನೂ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹಾಕಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಅಪ್ಪು ಜೊತೆ ಭಾವನಾ ನಾಯಕಿಯಾಗಿ ನಟಿಸಿದ್ದರು.
