ನವದೆಹಲಿ, 6 ಮಾರ್ಚ್
ನವದೆಹಲಿಯಲ್ಲಿಂದು ೨೦೨೨-೨೩ನೇ ಸಾಲಿನ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ೯೪ ಕಲಾವಿದರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಪ್ರದಾನ ಮಾಡಲಿದ್ದಾರೆ. ಸಂಗೀತ, ನೃತ್ಯ, ನಾಟಕ, ಜಾನಪದ ಮತ್ತು ಕಲೆಗಳಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಕಲಾವಿದರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಅಕಾಡೆಮಿ ಪ್ರಶಸ್ತಿ ಹೊರತಾಗಿ ರಾಷ್ಟ್ರಪತಿ ಅವರು, ಸಂಗೀತ ನಾಟಕ ಅಕಾಡೆಮಿ ಫೆಲೋಶಿಪ್- ಅಕಾಡೆಮಿ ರತ್ನ ಪ್ರಶಸ್ತಿಯನ್ನು ಪ್ರಸಿದ್ಧ ೭ ಕಲಾವಿದರಿಗೆ ಪ್ರದಾನ ಮಾಡಲಿದ್ದಾರೆ. ಸಂಗೀತ, ನೃತ್ಯ, ನಾಟಕ, ಜಾನಪದ ಮತ್ತು ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕಲಾವಿದರಿಗೆ ಸಂಗೀತ ನಾಟಕ ಅಕಾಡೆಮಿ ಫೆಲೋಶಿಪ್ ಅತ್ಯುನ್ನತ ಗೌರವವಾಗಿದೆ.
