
ಹುಬ್ಬಳ್ಳಿ, ಜನವರಿ ೮(ಹಿಸ):
ಆ್ಯಂಕರ್ : ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳಲು ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಯಶ್ ಅವರನ್ನು ಅವರ ಅಭಿಮಾನಿಗಳು ಬರಮಾಡಿಕೊಂಡರು.
ರಸ್ತೆ ಮೂಲಕ ಲಕ್ಷ್ಮೇಶ್ವರ ಮಾರ್ಗವಾಗಿ ಸೂರಣಗಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ನಿನ್ನೆ ರಾತ್ರಿ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದರು. ಆವರ ಕುಟುಂಬಕ್ಕೆ ಸಾಂತ್ವನ ಹೇಳುವದರ ಜೊತೆಗೆ ಕುಟುಂಬಕ್ಕೆ ಧೈರ್ಯ ತುಂಬಲು ಆಗಮಿಸಿದ್ದಾರೆ.
ಹಿಂದುಸ್ತಾನ್ ಸಮಾಚಾರ.
