ಮುಂಬೈ, 2 ಡಿಸೆಂಬರ್(ಹಿ.ಸ):
ಆ್ಯಂಕರ್ :
ಬರೋಬ್ಬರಿ 400ಕ್ಕೂ ಹೆಚ್ಚು ಗಂಟೆಗಳ ಆಪರೇಷನ್ ನಂತರ ಟನೆಲ್ ನಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರ ರಕ್ಷಣೆ ಕುರಿತು ರೋಚಕ ಘಟನೆಯನ್ನು ಸಿನಿಮಾ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಆಗಲೇ 14ಕ್ಕೂ ಹೆಚ್ಚು ನಿರ್ಮಾಪಕರು ಸಿನಿಮಾದ ಟೈಟಲ್ ಅನ್ನು ನೋಂದಾಯಿಸಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ದೇಶ ಹಲವು ಭಾಷೆಗಳಲ್ಲಿ ಈ ಕುರಿತು ಸಿನಿಮಾ ಬರಲಿದೆ.
ಮೊನ್ನೆಯಷ್ಟೇ ಸುರಂಗದ ಒಳಗಡೆ ಇದ್ದ ಕಾರ್ಮಿಕರು ಸುರಕ್ಷಿತವಾಗಿ ಹೊರಬರಲಿ ಎಂಬ ದೇಶದ ಜನರ ಪ್ರಾರ್ಥನೆ ಫಲ ನೀಡಿತ್ತು. ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿತ್ತು. 17 ದಿನ 400 ಗಂಟೆಗಳ ಆಪರೇಷನ್ ಯಶಸ್ವಿಯಾದ ನಂತರ ರಾತ್ರಿ ಒಬ್ಬೊಬ್ಬರಾಗಿ ಸುರಂಗದಿಂದ ಕಾರ್ಮಿಕರು ಹೊರ ಬಂದಿದ್ದರು.
ಹಿಂದೂಸ್ತಾನ್ ಸಮಾಚಾರ್
